ಕರ್ನಾಟಕ

ಹುಣಸೂರಿನಲ್ಲಿ ವಿಶ್ವನಾಥ್ ಮಗನಿಗೂ ಕೈತಪ್ಪಿದ ಬಿಜೆಪಿ ಟಿಕೆಟ್?

Pinterest LinkedIn Tumblr


ಮೈಸೂರು: ಜೆಡಿಎಸ್ ಪಕ್ಷ ತೊರೆದು ಅನರ್ಹಗೊಂಡಿರುವ ಎಚ್.ವಿಶ್ವನಾಥ್ ಗೆ ಭಾರೀ ಹಿನ್ನಡೆ ಎಂಬಂತೆ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೈಸೂರು ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ ಎಂದು ವರದಿ ತಿಳಿಸಿದೆ.

ಹುಣಸೂರು ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ತನ್ನ ಪುತ್ರ ಅಮಿತ್ ಗೆ ಬಿಜೆಪಿ ಟಿಕೆಟ್ ನೀಡುವಂತೆ ಎಚ್.ವಿಶ್ವನಾಥ್ ಬೇಡಿಕೆ ಇಟ್ಟಿದ್ದಾರೆನ್ನಲಾಗಿದೆ. ಇದೀಗ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ಹುಣಸೂರು ಕ್ಷೇತ್ರದಲ್ಲಿ ಡಾ.ಮಂಜುನಾಥ್ ಪರ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಅನರ್ಹ ಶಾಸಕ ಎಚ್.ವಿಶ್ವನಾಥ್ ಸೇರಿದಂತೆ 17 ಶಾಸಕರು ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು, ಏತನ್ಮಧ್ಯೆ ಡಿಸೆಂಬರ್ 5ಕ್ಕೆ ಉಪಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.

ಹುಣಸೂರು ಕ್ಷೇತ್ರದ ಎಚ್.ವಿಶ್ವನಾಥ್ ಉಪಚುನಾವಣೆಯಲ್ಲಿ ಪುತ್ರ ಅಮಿತ್ ನನ್ನು ಬಿಜೆಪಿ ಟಿಕೆಟ್ ನಿಂದ ಕಣಕ್ಕಿಳಿಸಲು ಲೆಕ್ಕಚಾರ ಹಾಕಿಕೊಂಡಿದ್ದರು. ಆದರೆ ಸದ್ಯದ ವರದಿ ಪ್ರಕಾರ ವಿಶ್ವನಾಥ್ ಗೆ ಆಗಲಿ, ಪುತ್ರನಿಗಾಗಲಿ ಬಿಜೆಪಿ ಟಿಕೆಟ್ ನೀಡುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಬಹಿರಂಗವಾಗಬೇಕಿದೆ.

Comments are closed.