ಕರ್ನಾಟಕ

ಯಡಿಯೂರಪ್ಪ ಮಾತಿಗೂ ಡೋಂಟ್ ಕೇರ್ – ಸರ್ಕಾರಕ್ಕೆ ಸವಾಲೆಸೆದ ನಿಷ್ಠಾವಂತ ಅಧಿಕಾರಿ

Pinterest LinkedIn Tumblr


ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಲೆಕ್ಷನ್ ಮುಂದೂಡಿಕೆಗೆ ಮಾಡಲು ಯತ್ನಿಸಿದ್ದ ಬಿಜೆಪಿಗೆ ಸರ್ಕಾರಿ ಅಧಿಕಾರಿ ಸವಾಲೆಸೆದಿದ್ದು, ಸಿಎಂ ಮಾತಿಗೂ ಕೇರ್ ಮಾಡದ ನಿಷ್ಠಾವಂತ ಐಎಎಸ್ ಅಧಿಕಾರಿ ಹರ್ಷಾಗುಪ್ತಾ ಇಂದು ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ.

ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ ಮಾಡಲು ಪ್ಲಾನ್ ಮಾಡಿದ್ದ ಬಿಜೆಪಿಗೆ ಅಧಿಕಾರಿಯ ಈ ನಿರ್ಧಾರ ಬಹುದೊಡ್ಡ ಶಾಕ್ ಲಭಿಸಿದ್ದು, ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸ ಮಾಡಲು ಆಗಲ್ಲ. ಶಾಸನ ಬದ್ಧವಾಗಿ ಲಭಿಸಿರುವ ಅಧಿಕಾರ ಬಳಿಸಿಕೊಂಡು ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಈಗಾಗಲೇ ನಿಗದಿಪಡಿಸಿದಂತೆ ಅಕ್ಟೋಬರ್ 1 ರಂದು ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆ ನಡೆಯುತ್ತದೆ ಎಂದು ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತಾ 7 ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಮೇಯರ್ ಅವಧಿ ಈಗಾಗಲೇ ಮುಕ್ತಾಯವಾಗಿದ್ದು, ಚುನಾವಣೆ ನಡೆಸುವುದು ಬಹುತೇಕ ಖಚಿತವಾಗಿದೆ ಎಂದು ಪತ್ರದಲ್ಲಿ ಗುಪ್ತಾ ಅವರು ಸ್ಪಷ್ಟಪಡಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಗೆ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿರುವಂತೆ, ಕೆಎಂಸಿ ಕಾಯ್ದೆ 10(1), 11(2), (ಬಿ) ಹಾಗೂ ಹೈಕೋರ್ಟ್ ತೀರ್ಪಿನ ಅನ್ವಯ ಕಾನೂನಿನ ಪ್ರಕಾರವೇ ನಾಳೆ ಚುನಾವಣೆ ನಡೆಯಲಿದೆ. ಚುನಾವಣೆ ಮುಂದೂಡುವ ಅಗತ್ಯವಿಲ್ಲ. ಮೇಯರ್ ಅವಧಿ ಸೆಪ್ಟೆಂಬರ್ 27 ಕ್ಕೆ ಮುಗಿದಿರುವುದರಿಂದ ಚುನಾವಣೆ ನಡೆಸುವುದು ಚುನಾವಣಾಧಿಕಾರಿಯಾಗಿ ನನ್ನ ಕರ್ತವ್ಯ ಎಂದು ಹರ್ಷಗುಪ್ತ ತಿಳಿಸಿದ್ದಾರೆ.

ಮೇಯರ್, ಉಪಮೇಯರ್, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಮಾರುಕಟ್ಟೆ, ಲೆಕ್ಕಪತ್ರ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ 8-30 ರಿಂದ ನಡೆಯಲಿದ್ದು, 11-30 ಕ್ಕೆ ಚುನಾವಣೆ ನಡೆಯಲಿದೆ.

ಕೆಎಂಸಿ ಕಾಯ್ದೆ ಪ್ರಕಾರವೇ ತಿರುಗೇಟು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ ಮಾಡಲು ಪ್ರಾದೇಶಿಕ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆಯಿಂದ ಇಂದು ಅಧಿಕೃತವಾಗಿ ಸೂಚನೆ ರವಾನೆಯಾಗಿತ್ತು. ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ವಿಜಯ್‍ಕುಮಾರ್ ಅವರು ಪ್ರಾದೇಶಿಕ ಆಯುಕ್ತರಿಗೆ ಚುನಾವಣೆ ಮುಂದೂಡುವಂತೆ ಬಿಬಿಎಂಪಿ ಕಾಯ್ದೆ ನಿಯಮಗಳನ್ನು ಉಲ್ಲೇಖಿಸಿ ಚುನಾವಣೆ ಮುಂದೂಡಲು ಸೂಚಿಸಲಾಗಿತ್ತು. ಆದರೆ ಈ ಇದೇ ಕೆಎಂಸಿ ಕಾಯ್ದೆ ನಿಯಮಗಳನ್ನು ಮುಂದಿಟ್ಟಿರುವ ಗುಪ್ತಾ ಅವರು, ಕೆಎಂಸಿ ಕಾಯ್ದೆಯ 10(1) , 11(2)ಬಿ ಪ್ರಕಾರ ಚುನಾವಣೆ ನಡೆಸಲು ಅವಕಾಶವಿದೆ. 1976 ಪ್ರಕಾರ 71 ರಲ್ಲಿ ಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡುವ ಅಧಿಕಾರ ಪ್ರಾದೇಶಿಕ ಆಯುಕ್ತರಾಗಿದೆ. ಹೈಕೋರ್ಟ್ 8 ಸ್ಥಾಯಿ ಸಮಿತಿಗೆ ಮಾತ್ರ ಚುನಾವಣೆ ತಡೆಯಾಜ್ಞೆ ನೀಡಿದ್ದು, ಕಾನೂನಿನಲ್ಲಿ ಚುನಾವಣೆ ಮುಂದೂಡಲು ಅವಕಾಶವಿಲ್ಲದಿರುವುದರಿಂದ ಚುನಾವಣೆ ನಡೆಸಬೇಕಿದೆ. ಪ್ರಾದೇಶಿಕ ಆಯುಕ್ತ ಶಾಸನಬದ್ಧ ಕರ್ತವ್ಯ. ಇದರ ಅನ್ವಯ ಚುನಾವಣೆ ದಿನಾಂಕ ಮುಂದೂಡಲು ಅವಕಾಶವಿಲ್ಲ ಎಂದು ಗೌರವ ಪೂರ್ವಕವಾಗಿ ಗುಪ್ತಾ ಅವರು ಮಾಹಿತಿ ಪತ್ರವನ್ನು ರವಾನೆ ಮಾಡಿದ್ದಾರೆ.

Comments are closed.