
ಬೆಂಗಳೂರು: ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ. ಪ್ರತಿ ದಿನವೂ ಅವರಿಗೆ ಸ್ವಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಮಾಜಿ ಸಿಎಂ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದಿನ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದಿದ್ದೆವು, ಆದರೆ ಭೇಟಿಗೆ ಅವಕಾಶ ನೀಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಮೋದಿಯವರ ಬಳಿ ಮಾತನಾಡುವ ಧೈರ್ಯವಿಲ್ಲ. ರಾಜ್ಯದ ಸಮಸ್ಯೆ ಬಗೆಹರಿಯುವುದು ಹೇಗೆ? ಎಂದು ಪ್ರಶ್ನಿಸಿದರು.
ಇನ್ನು ಮುಂದುವರೆದು ‘ಯಡಿಯೂರಪ್ಪನವರ ರೆಕ್ಕೆ ಪುಕ್ಕವನ್ನು ಬಿಜೆಪಿ ಹೈಕಮಾಂಡ್ ಕತ್ತರಿಸಿ ಬಿಟ್ಟಿದೆ. ಪ್ರತಿ ದಿನವೂ ಅವರಿಗೆ ಸ್ವಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲು ಅವರಿಗೆ ಅವಕಾಶವನ್ನು ಸಹ ನೀಡುತ್ತಿಲ್ಲ. ಪಾಪ, ಯಡಿಯೂರಪ್ಪನವರನ್ನು ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ.’ ವ್ಯಂಗ್ಯವಾಡಿದರು.
Comments are closed.