ಇಂದಿನಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್ಗಳು (ಆರ್ಸಿ) ವಿತರಣೆ ಯಾಗಲಿವೆ. ನಕಲಿ ಫೋರ್ಜರಿ ತಡೆಯುವ ಉದ್ದೇಶದಿಂದ ಅ.1 ರಿಂದ ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ ದೇಶಾದ್ಯಂತ ಏಕರೂಪದಲ್ಲಿ ವಿತರಿಸಲು ಸಾರಿಗೆ ಸಚಿವಾಲಯ ನಿರ್ಧರಿಸಿದೆ.
ಹೊಸ ಡಿಎಲ್ ಮತ್ತು ಆರ್ ಸಿಗಳಲ್ಲಿ ಕ್ಯೂಆರ್ ಕೋಡ್ ಇರಲಿದೆ. ಕೇಂದ್ರೀಯ ಆನ್ ಲೈನ್ ಡೇಟಾ ಬೇಸ್ ನಲ್ಲಿ ಚಾಲಕ ಮತ್ತು ವಾಹನಕ್ಕೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿ, ಸುಲಭ ಮತ್ತು ತ್ವರಿತವಾಗಿ ವಿವರಗಳ ಪರಾಮರ್ಶೆಗೆ ಅವಕಾಶ ಕಲ್ಪಿಸಲಾಗುತ್ತದೆ.
ಸ್ಮಾರ್ಟ್ ಡಿಎಲ್ ಮತ್ತು ಆರ್ಸಿಗಳಲ್ಲಿ ಮೈಕ್ರೋಚಿಪ್ಗಳನ್ನು ಅಳವಡಿಸಲಿದ್ದು, ಕ್ಯೂ ಆರ್ ಕೋಡ್ಗಳನ್ನೂ ಹೊಂದಿರುತ್ತವೆ.ಅವುಗಳಲ್ಲಿ ಎನ್ಎಫ್ಸಿ (ನಿಯರ್ ಫೀಲ್ಡ್ ಕಮ್ಯುನಿಕೇಶನ್) ವೈಶಿಷ್ಟ್ಯವನ್ನೂ ಅಳವಡಿಸಲಾಗುತ್ತಿದ್ದು ಮೆಟ್ರೋ ಮತ್ತು ಎಟಿಎಂ ಕಾರ್ಡ್ಗಳ ರೀತಿಯಲ್ಲಿ ಬಳಸಬಹುದಾಗಿದೆ. ಇದರಿಂದ ಟ್ರಾಫಿಕ್ ಪೊಲೀಸರು ವಿಶೇಷ ಸಾಧನಗಳ ಮೂಲಕ (ಹ್ಯಾಂಡ್ಹೆಲ್ಡ್ ಡಿವೈಸಸ್) ಈ ಕಾರ್ಡ್ಗಳನ್ನು ಸ್ಕ್ಯಾನ್ ಮಾಡಿ ಎಲ್ಲ ವಿವರ ಪಡೆಯಬಹುದಾಗಿದೆ.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಈ ಪ್ರಮಾಣಪತ್ರಗಳ ನೋಟ, ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.

Comments are closed.