ಕರ್ನಾಟಕ

ವರದಿ ಹೊಂದಾಣಿಕೆ ಆಗದ್ದಕ್ಕೆ ನೆರೆಪರಿಹಾರ ಕಾರ್ಯ ವಿಳಂಬ: ಯಡಿಯೂರಪ್ಪ

Pinterest LinkedIn Tumblr


ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ತಯಾರಿಸಿದ ಕೇಂದ್ರ ಅಧ್ಯಯನ ತಂಡದ ವರದಿಗೂ ಹಾಗೂ ರಾಜ್ಯದ ವರದಿಯ ಅಂಕಿಅಂಶಗಳಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಈ ಬಗ್ಗೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಎಲ್ಲ ಸಚಿವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ದೇಶದ ಯಾವುದೇ ಪ್ರವಾಹ ಪೀಡಿತ ರಾಜ್ಯಗಳಿಗೆ ಪರಿಹಾರ ಬಿಡುಗಡೆಯಾಗಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ನೆರೆ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಪರಿಹಾರ ಬಿಡುಗಡೆಯಾಗುವ ವಿಶ್ವಾಸವಿದೆ. ಈಗಾಗಲೇ ನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಲಾಗಿದೆ ಎಂದರು.

ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡಲಾಗುವುದು ಎಂದ ಅವರು, ರೈತರಾಗಲೀ, ಸಂತ್ರಸ್ತರಾಗಲಿ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ. ಆತಂಕಕ್ಕೆ ಒಳಗಾಗಬಾರದು ಎಂದರು.

Comments are closed.