ಕರ್ನಾಟಕ

ರಾಜ್ಯದ ಹಲವೆಡೆ ಅ.10 ,11ರಂದು ಗುಡುಗು ಸಹಿತ ಭಾರಿಮಳೆ ಸಂಭವ

Pinterest LinkedIn Tumblr

ಬೆಂಗಳೂರು : ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮಾರುತಗಳು ಗಂಟೆಗೆ 40 ರಿಂದ 50 ಕಿಲೋಮೀಟರ್ ಬೀಸುತ್ತಿವೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಅಕ್ಟೋಬರ್ 10 ಮತ್ತು ಅಕ್ಟೋಬರ್ 11ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯಾಧ್ಯಂತ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಒಳನಾಡು ಮತ್ತು ದಕ್ಷಿಣ ಒಳನಾಡಿನ ನೈರುತ್ಯ ಮಾರುತಗಳ ಪ್ರಭಾವದಿಂದ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ.

ಇತ್ತ ಈಗಾಗಲೇ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ನಿನ್ನೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಧರ್ಮಸ್ಥಳ, ಶಿರಹಟ್ಟಿ, ನೆಲಮಂಗಲ, ಚಿಕ್ಕಬಳ್ಳಾಪುರ, ಮಾಗಡಿ, ಧಾರವಾಡ ಸೇರಿದಂತೆ ವಿವಿದೆಢೆ ಮಳೆಯಾಗಿದೆ. ಇಂತಹ ಮಳೆ ಇಂದು ನಾಳೆ ಕೂಡ ಮುಂದುವರೆಯಲಿದೆ.

Comments are closed.