ಕರ್ನಾಟಕ

ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಕಾಲೇಜುಗಳ ಮೇಲೆ ಏಕಾಏಕಿ ಐಟಿ ರೈಡ್

Pinterest LinkedIn Tumblr

ಕೋಲಾರ : ಜಿಲ್ಲೆಯ ಪ್ರಭಾವಿ ನಾಯಕರೆನಿಸಿಕೊಂಡಿದ್ದ ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಕಾಲೇಜುಗಳ ಮೇಲೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಕಚೇರಿಗಳಲ್ಲಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕೋಲಾರದ ಪ್ರಭಾವಿ ನಾಯಕರೆನಿಸಿಕೊಂಡಿದ್ದ ಆರ್ ಎಲ್ ಜಾಲಪ್ಪ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಮೇಲೆ ಏಕಾಏಕಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ.

ಕೋಲಾರದಲ್ಲಿನ ಆರ್ ಎಲ್ ಜಾಲಪ್ಪ ಆಸ್ಪತ್ರೆ ಹಾಗೂ ಕಾಲೇಜುಗಳ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆಯ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಮೂಲಕ ಆರ್ ಎಲ್ ಜಾಲಪ್ಪ ಆಸ್ಪತ್ರೆ ಹಾಗೂ ಕಾಲೇಜುಗಳಿಗೆ ಐಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

Comments are closed.