ಕರ್ನಾಟಕ

ಪ್ರಥಮ, ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತೆ ಪರೀಕ್ಷಾ ವೇಳಾಪಟ್ಟಿ ಪ್ರಕಟ

Pinterest LinkedIn Tumblr

ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪೂರ್ವ ಸಿದ್ಧತೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫೆ. 10 ರಿಂದ ಫೆ.20 ರ ತನಕ ನಡೆಯಲಿದ್ದು, ಜ. 2 ರಿಂದ ಜ. 10 ರ ವರೆಗೆ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಗಿಸುವಂತೆ ಇಲಾಖೆ ಸೂಚಿಸಿದೆ. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್ ವೀಕ್ಷಿಸಲು ಪ್ರಕಟಣೆ ತಿಳಿಸಿದೆ.

ಇನ್ನು ದ್ವಿತೀಯ ಪಿಯುಸಿ ಪೂರ್ವಭಾವಿ ಪರೀಕ್ಷೆ ಜನವರಿ 10 ರಿಂದ ಜ. 21 ರ ತನಕ ನಡೆಯಲಿದ್ದು, ಪ್ರಾಯೋಗಿಕ ಪರೀಕ್ಷೆಗಳು ಜ.25 ರಿಂದ ಫೆ. 10 ರೊಳಗೆ ನಡೆಯಲಿದೆ. ಪರೀಕ್ಷೆಗಳನ್ನು ಆಯಾ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನಿಗದಿತ ದಿನಾಂಕದಂದೇ ಪರೀಕ್ಷೆ ನಡೆಸುವಂತೆ ಇಲಾಖೆ ನಿರ್ದೇಶನ ನೀಡಿದೆ.

Comments are closed.