ಕರ್ನಾಟಕ

ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

Pinterest LinkedIn Tumblr

ಬೆಂಗಳೂರು : ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕಬ್ಬು ಬೆಳೆಗಾರರು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಕಬ್ಬು ಸಾಗಿಸಲು ತಗಲುವ ವೆಚ್ಚವರನ್ನು ಸರ್ಕಾರವೇ ಭರಿಸಲು ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮಂಡ್ಯ, ಮೈಸೂರು ಭಾಗದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಕಬ್ಬು ಸಾಗಣೆ ವೆಚ್ಚವನ್ನು ಭರಿಸಬೇಕೆಂದು ಒತ್ತಾಯಿಸಿದ್ದರು.

ಶ್ರೀಕಂಠೇಗೌಡರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್. ಅಶೋಕ್, ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಮಾಲೋಚನೆ ಮಾಡಿ ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Comments are closed.