ಕರ್ನಾಟಕ

ವರ್ಷದಲ್ಲಿ 1 ಸಾವಿರ ಜೋಡಿಗಳಿಗೆ ಕಂಕಣ ಭಾಗ್ಯ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧಾರ.

Pinterest LinkedIn Tumblr

ಬೆಂಗಳೂರು : ರಾಜ್ಯದ ಬಡ ಜನತೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಿಂದೂ ಸಂಪ್ರದಾಯದಂತೆ ವಿವಾಹವಾಗಲು ಅನುಕೂಲವಾಗುವಂತೆ ಮುಜರಾಯಿ ಇಲಾಖೆ ಸರ್ಕಾರದ ವತಿಯಿಂದಲೇ ಉಚಿತ ಸಾಮೂಹಿಕ ವಿವಾಹ ಆಯೋಜಿಸಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಹಿಂದೂ ಸಂಪ್ರದಾಯದಂತೆ ಉಚಿತ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ ನಡೆಸಲಾಗಿದ್ದು, ರಾಜ್ಯದ ಆಯ್ದ 100 ಎ ದರ್ಜೆ ದೇಗುಲಗಳಲ್ಲಿ ಸರ್ಕಾರದ ವತಿಯಿಂದ ವರ್ಷಕ್ಕೆ ಒಮ್ಮೆ ಉಚಿತ ಸಾಮೂಹಿಕ ವಿವಾಹ ಯೋಜನೆಗೆ ಸರ್ಕಾರ ಚಿಂತನೆ ನಡೆಸಿದೆ.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ತಗಲುವ ವೆಚ್ಚವನ್ನು ಆಯಾ ದೇವಸ್ಥಾನದಲ್ಲಿ ಸಂಗ್ರಹವಾಗುವ ಆದಾಯದಿಂದಲೇ ಭರಿಸಲಾಗು ತ್ತದೆ. ಸಾಮೂಹಿಕ ವಿವಾಹದಲ್ಲಿ 8 ಗ್ರಾಂ ಚಿನ್ನದ ಮಾಂಗಲ್ಯ, ವಧು ಮತ್ತು ವರನಿಗೆ ವಿವಾಹ ವಸ್ತ್ರ ವಿತರಣೆ ಮಾಡಲಾಗುತ್ತದೆ. ಜೊತೆಗೆ ವರ್ಷದಲ್ಲಿ ಬರೋಬ್ಬರಿ 1 ಸಾವಿರ ಜೋಡಿಗಳಿಗೆ ಕಂಕಣ ಭಾಗ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Comments are closed.