ಕರ್ನಾಟಕ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸ್ತ್ರೀ ಶಕ್ತಿ ಸಂಘಕ್ಕೆ ಕಹಿಸುದ್ದಿ

Pinterest LinkedIn Tumblr

ಬೆಂಗಳೂರು : ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಹಿಸುದ್ದಿವೊಂದು ನೀಡಿದ್ದು, ಸ್ತ್ರೀ ಶಕ್ತಿ ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲು ಶಿಫಾರಸು ಮಾಡಲಾಗಿದೆ.

ಹೌದು, ಒಂದೇ ಕುಟುಂಬದ ಮೂರ್ನಾಲ್ಕು ಹೆಚ್ಚು ಮಹಿಳೆಯರು ಒಂದೇ ಸ್ತ್ರೀ ಶಕ್ತಿ ಗುಂಪಿನಲ್ಲಿರುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಮನಕ್ಕೆ ಬಂದಿದ್ದು, ಇಂತಹ ಬೆಳವಣಿಗೆ ಸರಿಯಲ್ಲ, ಹೀಗಾಗಿ ಇನ್ಮುಂದೆ ಪ್ರತಿ ಕುಟುಂಬದಲ್ಲಿ ಒಬ್ಬರನ್ನು ಮಾತ್ರ ಸ್ತ್ರೀ ಶಕ್ತಿ ಸಂಘಕ್ಕೆ ಸದಸ್ಯೆ ಆಗುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸಬೇಕು ಎಂದು ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಒಂದೇ ಕುಟುಂಬದ ಹೆಚ್ಚು ಮಹಿಳೆಯರು ಸ್ತ್ರೀಶಕ್ತಿ ಸಂಘದಲ್ಲಿದ್ದರೆ ಇದರ ಪ್ರಯೋಜನಗಳು ಕೆಲವರಿಗಷ್ಟೇ ಸೀಮಿತವಾಗಿರೆ ಕೆಳಹಂತದ ಕುಟುಂಬದ ವ್ಯಕ್ತಿಗೂ ಇದರ ಪ್ರಯೋಜನ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಸಮಿತಿ ಸ್ತ್ರೀ ಶಕ್ತಿ ಸಂಘಗಳ ಸದದ್ಯರಿಗೆ ಗುರುತಿನ ಚೀಟಿ ನೀಡಲು ಮುಂದಾಗಿದೆ. ಇದರಿಂದ ಒಂದೇ ಕುಟುಂಬದ ಇತರೆ ಮಹಿಳೆಯರು ಸ್ತ್ರೀ ಶಕ್ತಿ ಸಂಘದಲ್ಲಿ ಇರುವುದು ಪತ್ತೆ ಹಚ್ಚಲು ಸಹಕಾರಿಯಾಗಲಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಇದುವರೆಗೂ 1.54 ಲಕ್ಷ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿದ್ದು, 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ. ಇದುವರೆಗೆ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂ. ಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ.

Comments are closed.