ಹುಬ್ಬಳ್ಳಿ : ರಾಜ್ಯದಲ್ಲಿ ಉಗ್ರರ ನಿಗ್ರಹಕ್ಕೆ ಸ್ಥಾಪನೆಯಾಗಿರುವ ಭಯೋತ್ಪಾದನೆ ನಿಗ್ರಹ ದಳ ಅನ್ನು ಇನ್ನಷ್ಟು ಸದೃಢಗೊಳಿಸುವ ಬಗ್ಗೆ ಶೀಘ್ರವೇ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಟಿಎಸ್ ಪಡೆಗೆ ಸಮರ್ಥ ಹಾಗೂ ಅನುಭವ ಹೊಂದಿರುವ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅಗತ್ಯ ಸಿಬ್ಬಂದಿ ನೇಮಕ, ತಂತ್ರಜ್ಞಾನ ಒದಗಿಸಲಾಗುವುದು ಮತ್ತು ರಾಜ್ಯದಲ್ಲಿ ಈಗಾಗಲೇ ಭಯೋತ್ಪಾದನೆ ನಿಗ್ರಹ ದಳ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.
ಇನ್ನು ಭಯೋತ್ಪಾದಕರ ಹಿಟ್ ಲಿಸ್ಟ್ ನಲ್ಲಿರುವ ಬೆಂಗಳೂರಿಗೆ ಪ್ರತ್ಯೇಕ ಉಗ್ರ ನಿಗ್ರಹ ಪಡೆ ಸ್ಥಾಪಿಸಲು ಗೃಹ ಇಲಾಖೆ ಮುಂದಾಗಿದ್ದು, ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು, ಶೀಘ್ರವೇ ಎನ್ ಟಿಎಸ್ ತೆರೆದು ವಿಶೇಷ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.

Comments are closed.