ಕರ್ನಾಟಕ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 20 ರ ವರೆಗೆ “ಯೆಲ್ಲೋ ಅಲರ್ಟ್” ಘೋಷಣೆ.

Pinterest LinkedIn Tumblr

ಬೆಂಗಳೂರು : ಕರ್ನಾಟಕಕ್ಕೆ ಈಶಾನ್ಯ ಮುಂಗಾರು ಮಾರುತ ಪ್ರವೇಶಿಸಿದ್ದು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 20 ರ ವರೆಗೆ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮೈಸೂರು, ಹಾಸನ, ಕೊಡಗು, ಮಂಡ್ಯ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Comments are closed.