ಕರ್ನಾಟಕ

ನಿರ್ದೇಶಕ ಟಿ.ಎಸ್.ನಾಗಾಭರಣ ಅವರಿಗೆ ಶ್ರೀ ಶಿವಕುಮಾರ ಪ್ರಶಸ್ತಿ

Pinterest LinkedIn Tumblr


ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಶಾಖಾ ‌ಮಠದ ಶ್ರೀ ಶಿವಕುಮಾರ ಕಲಾಸಂಘದಿಂದ ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ,‌ ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ.

ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಪ್ರಶಸ್ತಿ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.

ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Comments are closed.