ಕರ್ನಾಟಕ

ರ‍್ಯಾಂಪ್ ವಾಕ್ ಸಮಯದಲ್ಲಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Pinterest LinkedIn Tumblr


ಬೆಂಗಳೂರು: ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಪ್ರೆಶರ್ಸ್ ಡೇ ಪ್ರಯುಕ್ತ ರ‍್ಯಾಂಪ್ ವಾಕ್ ಅಭ್ಯಾಸ ನಡೆಸಲಾಗುತ್ತಿತ್ತು. ಆ ವೇಳೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ಶಾಲಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಶಾಲಿನಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

Comments are closed.