ಕರ್ನಾಟಕ

ನ.1ರಿಂದ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ

Pinterest LinkedIn Tumblr

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕನ್ನಡ ಮಾಯವಾಗುತ್ತಿದೆ ಎಂದು ಅನೇಕ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಇದರ ಬೆನ್ನಲ್ಲೇ, ಇದೀಗ ನವೆಂಬರ್ 1ರಿಂದ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ. ಒಂದು ವೇಳೆ ನಾಮಫಲಕದಲ್ಲಿ ಕನ್ನಡ ಇಲ್ಲದೇ ಇದ್ದರೇ ಅಂಗಡಿಯ ಟ್ರೈಡ್ ಲೈಸೆನ್ಸ್ ರದ್ದುಗೊಳಿಸುವುದಾಗಿ ಬಿಬಿಎಂಪಿ ಆಯುಕ್ತರು ಖಡಕ್ ಆದೇಶ ಹೊಸಡಿಸಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನ ಅನೇಕ ಭಾಗಗಳಲ್ಲಿ ಕನ್ನಡ ಮಾಯವಾಗುತ್ತಿತ್ತು. ಅದರಲ್ಲೂ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡವಂತೂ ಮಂಗಮಾಯವಾಗಿತ್ತು. ಹೀಗಾಗಿ ಅನೇಕರು ಕನ್ನಡದಲ್ಲಿಯೇ ನಾಮಫಲಕ ಹಾಕಿರಬೇಕು ಎಂದು ಒತ್ತಾಯಿಸಿದ್ದರೂ, ಯಾರೂ ಕ್ಯಾರೆ ಎಂದಿರಲಿಲ್ಲ.

ಇದೀಗ ಇದಕ್ಕೆಲ್ಲಾ ಬ್ರೇಕ್ ಬಿದ್ದಿದೆ. ಈ ಕುರಿತಂತೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇಂತಹ ನಿಯಮವನ್ನು ಅಂಗಡಿ ಮಾಲೀಕರು ಮೀರಿದಲ್ಲಿ ಅವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದಾಗಿ ಆದೇಶದಲ್ಲಿ ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ.

Comments are closed.