ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್.

Pinterest LinkedIn Tumblr

ಬೆಳಗಾವಿ : ಕೆಲ ತಿಂಗಳ ಹಿಂದೆ ಭಾರೀ ಮಳೆಗೆ ತತ್ತರಿಸಿದ್ದ ಉತ್ತರ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯಿಂದ ಶಾಕಿಂಗ್ ನ್ಯೂಸ್ ನೀಡಿದ್ದು, ಅ. 24 ರ ವರೆಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಕಳೆದ ರಾತ್ರಿ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮತ್ತೆ ಪ್ರವಾಹ ಸೃಷ್ಠಿಯಾಗಿದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಿರೇಕೆರೂರು ದಾವಣಗರೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹುಬ್ಬಳ್ಳಿಯಲ್ಲಿ ಮಳೆಗೆ ಜನರ ಜೀವನ ಅಸ್ತವ್ಯಸ್ಥಗೊಂಡಿದೆ. ನವೀಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವ ಕಾರಣ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನಲ್ಲಿ ಪ್ರವಾಹ ಉಂಟಾಗಿದೆ.

Comments are closed.