ಕರ್ನಾಟಕ

ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ: ಇಂದು ರಾಷ್ಟ್ರವ್ಯಾಪಿ ಮುಷ್ಕರ

Pinterest LinkedIn Tumblr


ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನಕ್ಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇಂದು ದೇಶಾದ್ಯಂತ ಬ್ಯಾಂಕ್​​ ನೌಕರರು ಮುಷ್ಕರ ಹೂಡಲಿದ್ದಾರೆ. ಈ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಮುಷ್ಕರ ಕರೆಗೆ ಬೆಂಬಲ ನೀಡಿರುವ ವಿವಿಧ ಬ್ಯಾಂಕ್​ಗಳ ನೌಕರರ ಒಕ್ಕೂಟದ ಸದಸ್ಯರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿದ್ದಾರೆ.

ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ಮುಂದಾಗಿತ್ತು. ಹಾಗಾಗಿ ಬ್ಯಾಂಕ್‌ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಷ್ಟ್ರವ್ಯಾಪಿ ‘ಬ್ಯಾಂಕ್’ ಮುಷ್ಕರಕ್ಕೆ ಕರೆ ನೀಡಲಾಯ್ತು. ಆದರೆ, ಸರ್ಕಾರದ ಮಧ್ಯಪ್ರದೇಶದಿಂದ ಈ ರಾಷ್ಟ್ರವ್ಯಾಪಿ ‘ಬ್ಯಾಂಕ್’ ಮುಷ್ಕರ ಮುಂದೂಡಲಾಗಿತ್ತು.

ಬ್ಯಾಂಕ್‌ಗಳ ವಿಲೀನ ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆಕೊಟ್ಟಿದ್ದ 2 ದಿನಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಿತ್ತು. ಈ ಬೆನ್ನಲ್ಲೇ ಬ್ಯಾಂಕ್ ವಿಲೀನ ಸಂಬಂಧ ಉದ್ಭವಿಸಿರುವ ಸಮಸ್ಯೆ ಬಗೆಹರಿಸುವುದಾಗಿ ಕೇಂದ್ರ ಹಣಕಾಸು ಕಾರ್ಯದರ್ಶಿ ಭರವಸೆ ನೀಡಿದ್ದರು. ಆದ್ದರಿಂದ ಸೆಪ್ಟೆಂಬರ್ 26 ಹಾಗೂ 27ರಂದು ನಡೆಸಲು ತೀರ್ಮಾನಿದ್ದ 48 ಗಂಟೆಗಳ ಮುಷ್ಕರ ಮುಂದೂಡಲಾಗಿದೆ ಎಂದು ಬ್ಯಾಂಕ್​​ ನೌಕರರ ಸಂಘ ತಿಳಿಸಿತ್ತು.

ಅತ್ತ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ನೀಡುತ್ತಿದ್ದಂತೆಯೇ ಇತ್ತ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ರಾಜೀವ್ ಕುಮಾರ್ ಸಂಧಾನಸಭೆ ನಡೆಸಿದ್ದರು. ಈ ವೇಳೆ ಸಿಬ್ಬಂದಿಗಳ ಸಮಸ್ಯೆಗಳ ಕುರಿತು ಒಂದು ಸಮಿತಿ ರಚನೆ ಮಾಡಲು ಒಪ್ಪಿಗೆ ಸೂಚಿಸಿದ್ದರಿಂದ ಒಕ್ಕೂಟ ಅನಿರ್ಧಿಷ್ಟಾವಧಿಗೆ ಮುಷ್ಕರ ಮುಂದೂಡಿತ್ತು. ಆದರೀಗ, ಕೇಂದ್ರ ಸರ್ಕಾರ ಮಾತು ತಪ್ಪಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕಾಗಿ ಬ್ಯಾಂಕ್​​ ನೌಕರರ ಸಂಘವೂ ನಾಳೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಬ್ಯಾಂಕ್ ಗಳ ವಿಲೀನ, ವೇತನ ಸಮಸ್ಯೆ ಪರಿಷ್ಕಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ನಾಲ್ಕು ಪ್ರಮುಖ ಬ್ಯಾಂಕಿಂಗ್ ಸಿಬ್ಬಂದಿಗಳ ಒಕ್ಕೂಟಗಳು ಬೀದಿಗಿಳಿದಿವೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ನೊಬೊ), ಮತ್ತು ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‌ಬಿಒಸಿ) ನಾಳೆ ಮುಷ್ಕರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

Comments are closed.