ಕರ್ನಾಟಕ

ತುಂಗಭದ್ರಾ ಜಲಾಶಯದಿಂದ 2 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ

Pinterest LinkedIn Tumblr

ಕೊಪ್ಪಳ: ತುಂಗಭದ್ರಾ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಜಲಾಶಯದಿಂದ ನದಿಗೆ ಹೆಚ್ಚಿನ ನೀರನ್ನು ಹರಿಬಿಡಲಾಗುತ್ತಿದೆ.

ಮಂಗಳವಾರ 1,55,431 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 33 ಕ್ರಸ್ಟ್ ಗೇಟ್ ಗಳಿಂದ 2,01,000 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಜಿಲ್ಲೆಯಾದ್ಯಂತ ಸೋಮವಾರದಿಂದ ಮಳೆ ಹೆಚ್ಚಾಗಿದೆ. ಹೀಗಾಗಿ ಜಲಾಶಯದ ಒಳಹರಿವು, ಹೊರಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆಯಾಗಿದೆ. ಈ ನೀರಿನಿಂದಾಗಿ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಕಂಪ್ಲಿ- ಚಿಕ್ಕಜಂತಗಲ್ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ಬೀದರ್, ಕಲಬುರಗಿ, ರಾಯಚೂರು, ಹೈದರಾಬಾದ್, ಮಂತ್ರಾಲಯ ಸೇರಿದಂತೆ ಪ್ರಮುಖ ನಗರಗಳಿಗೆ ಸಂಪರ್ಕ ಕಡಿತಗೊಂಡಿದೆ.

ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡಿಯೂ ಜಲಾವೃತಗೊಳ್ಳುತ್ತಿದೆ. ಕಳೆದ ಬಾರಿ ಪ್ರವಾಹ ಸಂಭವಿಸಿದ್ದ ಸಂದರ್ಭ ನೂರಾರು ಜನ ಪ್ರವಾಸಿಗರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಈ ಬಾರಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.

Comments are closed.