ಕರ್ನಾಟಕ

ಕ್ರಿಕೆಟ್ ಬೆಟ್ಟಿಂಗ್ : ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್, ಬ್ಯಾಟ್ಸ್‌ಮನ್ ಬಂಧನ.

Pinterest LinkedIn Tumblr

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್, ಬ್ಯಾಟ್ಸ್‌ಮನ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿನು ಪ್ರಸಾದ್ ಕೋಚ್ ಆಗಿದ್ದು, ವಿಶ್ವನಾಥನ್ ಎಂಬಾತ ಬ್ಯಾಟ್ಸ್‌ಮನ್ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಕಳೆದ 2018ರಲ್ಲಿ ಬೆಂಗಳೂರು ಮತ್ತು ಬೆಳಗಾವಿ ತಂಡದ ನಡುವಿನ ಪಂದ್ಯದಲ್ಲಿ ವಿಶ್ವನಾಥನ್, ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಕ್ಕೆ ಅನುಕೂಲ ಮಾಡಿಕೊಟ್ಟಿದ್ದ. ಇದಕ್ಕಾಗಿ 5 ಲಕ್ಷ ರೂ. ವ್ಯವಹಾರ ನಡೆದಿತ್ತು ಎನ್ನುವ ಆರೋಪ ಕೇಳಿಬಂದಿದೆ.

ಕೆಪಿಎಲ್‌ನ ಬೆಟ್ಟಿಂಗ್ ಸಂಬಂಧ ಈಗಾಗಲೇ 8 ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕ್ರಿಕೆಟ್ ಆಟಗಾರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು

Comments are closed.