ಕರ್ನಾಟಕ

ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 30 ಬಾಂಗ್ಲಾದೇಶ ಪ್ರಜೆಗಳ ಬಂಧನ

Pinterest LinkedIn Tumblr

ಬೆಂಗಳೂರು : ಬೆಂಗಳೂರು ನಗರದ ವಿವಿಧಡೆ ಅಕ್ರಮವಾಗಿ ನೆಲೆಸಿರುವ ಸ್ಥಳಗಳಲ್ಲಿ ಸಿಸಿಬಿ ಪೊಲೀಸರು ಶೋಧ ನಡೆಸಿ 30 ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಅಕ್ರಮ ವಲಸಿಗರು ವಾಸವಾಗಿದ್ದು, ಅಪರಾಧ ಚಟುವಟಿಕೆಗಳಲ್ಲೂ ತೊಡಗಿಕೊಂಡಿರುವ ಬಗ್ಗೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಂಧಿತರ ವಿರುದ್ಧ ವಿದೇಶಿಯರ ನೋಂದಣಿ ಕಾಯ್ದೆ ಅನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇನ್ನು ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಪೌರತ್ವ ನೋಂದಣಿ ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೆಲ ದಿನಗಳ ಹಿಂದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದರು.

Comments are closed.