ಕರ್ನಾಟಕ

ಬಾಲ್ಯವಿವಾಹಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದ ಪೋಷಕರಿಗೆ ಬಿಗ್ ಶಾಕ್ 

Pinterest LinkedIn Tumblr

ಕಲಬುರಗಿ ನಗರದ ತಾಜಾ ಸುಲ್ತಾನಪುರ ರಸ್ತೆಯ ಹಮಾಲ್ ಏರಿಯಾದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಕ್ಕಳ ರಕ್ಷಣಾ ಅಧಿಕಾರಿಗಳ ತಂಡ ತಡೆದಿದೆ.

ಪೋಷಕರು ಅಪ್ರಾಪ್ತ ವಯಸ್ಸಿನ ಬಾಲಕಿಯ ಮದುವೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದು, ನಡೆಯಬೇಕಿದ್ದ ಬಾಲಕಿ ಮದುವೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕಿಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಮಂದಿರಕ್ಕೆ ಕಳುಹಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳ ತಂಡದಿಂದ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಲಾಗಿದೆ.

Comments are closed.