ಕರ್ನಾಟಕ

ಡಿಕೆಶಿ ಅಮ್ಮ, ಹೆಂಡತಿ ವಿಚಾರಣೆ ಬೆಂಗಳೂರಿನಲ್ಲಿ ನಡೆಸುವಂತೆ ಕೋರಿದ ಅರ್ಜಿ ನವೆಂಬರ್ 4ಕ್ಕೆ ಮುಂದೂಡಿಕೆ

Pinterest LinkedIn Tumblr


ನವದೆಹಲಿ: ಅಕ್ರಮ ಹಣ ವರ್ಗಾವಣೆಯ ಆರೋಪ ಹೊತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಯ ಅರ್ಜಿ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ.

ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ದೆಹಲಿ ಹೈಕೋರ್ಟಿನಲ್ಲಿ ಬಧವಾರ ವಿಚಾರಣೆಗೆ ಬಂದಿತ್ತು. ನ್ಯಾಯಮೂರ್ತಿ ಬ್ರಿಜೇಶ್ ಸೇಥಿ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆಯ ವೇಳೆ ಗೌರಮ್ಮ ಪರ ವಕೀಲರು ಬೆಂಗಳೂರಿನಲ್ಲಿ ವಿಚಾರಣೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಇಡಿ ಪರ ವಕೀಲರು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮುಂದುಡಿ ಆದೇಶಿಸಿದೆ.

ಇದರ ಮಧ್ಯೆ ಇಡಿ ಗೌರಮ್ಮನವರಿಗೆ ಇಂದು ಬೆಳಿಗ್ಗೆ ಹೊಸದಾಗಿ ಸಮನ್ಸ್ ನೀಡಿದೆ ಎಂದು ಹೇಳಲಾಗಿದೆ. ಆದರೆ ಗೌರಮ್ಮ ಪರ ವಕೀಲರು ಆ ಸಮನ್ಸ್ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಸಿದ್ದಾರೆ.

Comments are closed.