ಕರ್ನಾಟಕ

ಅಡಕೆ ಬೆಳೆಗಾರರ ಹಿತರಕ್ಷಣೆಗೆ ಹೊಸ ಕಾರ್ಯಪಡೆ ರಚನೆ

Pinterest LinkedIn Tumblr

ಬೆಂಗಳೂರು: ರಾಜ್ಯದ ಅಡಕೆ ಬೆಳೆಗಾರರ ಹಿತರಕ್ಷಣೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚನೆ ಮಾಡಿದೆ.

ಜನಪ್ರತಿನಿಧಿಗಳು, ಅಡಕೆ ಮಾರಾಟ ಸಹಕಾರ ಸಂಸ್ಥೆಯ ಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆಯನ್ನು ರಚಿಸಲು ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸೌಧದಲ್ಲಿ ಅಡಕೆ ಬೆಳೆಯುವ ಪ್ರದೇಶದ ಶಾಸಕರು, ಸಂಸದರು, ಅಡಕೆ ಉತ್ಪನ್ನ ಮಾರಾಟ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಿಎಂ, ಅಡಕೆ ಬೆಳೆಗಾರರ ಹಿತರಕ್ಷಣೆಗೆ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ ಕಾರ್ಯಪಡೆಯ ಅಧ್ಯಕ್ಷರಾಗಿದ್ದು, ಶಾಸಕ ಹರತಾಳು ಹಾಲಪ್ಪ, ಚನ್ನಗಿರಿಯ ತುಮ್ಕೋಸ್, ಮಂಗಳೂರಿನ ಕ್ಯಾಂಪ್ಕೋ, ಶಿವಮೊಗ್ಗದ ಮ್ಯಾಮ್ಕೋಸ್ ಸೇರಿದಂತೆ ಇತರೆ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಪಡೆಯಲ್ಲಿ ಇರಲಿದ್ದಾರೆ. 10 ಸದಸ್ಯರನ್ನು ಒಳಗೊಂಡ ಈ ಕಾರ್ಯಪಡೆ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

Comments are closed.