ಕರ್ನಾಟಕ

ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಹಿನ್ನೆಲೆ : ತಮಿಳುನಾಡಿನಲ್ಲಿ ಬಿಗಿ ಭದ್ರತೆ

Pinterest LinkedIn Tumblr

ಚೆನ್ನೈ: ಬಹುನಿರೀಕ್ಷಿತ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಪ್ರಕಟಗೊಳ್ಳುವ ವೇಳೆ ಮತ್ತು ಬಳಿಕ ತಮಿಳು ನಾಡಿ ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದ್ದು, ನವೆಂಬರ್ 10ರ ನಂತರ ಯಾವುದೇ ಪೊಲೀಸ್ ಸಿಬ್ಬಂದಿಗೆ ರಜೆ ನೀಡದಂತೆ ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ನವೆಂಬರ್ 10ರ ನಂತರ ಮುಂದಿನ ಆದೇಶದವರೆಗೆ ಯಾವುದೇ ಸಿಬ್ಬಂದಿಗೆ ರಜೆ ನೀಡದಂತೆ ಪೊಲೀಸ್ ಮಹಾ ನಿರ್ದೇಶಕ ಜೆ ಕೆ ತ್ರಿಪಾಠಿ ಅವರು, ಸಿಬಿ, ಸಿಐಡಿ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಅಲ್ಲದೆ ಎಲ್ಲಾ ಪಡೆಗಳನ್ನು ಸರ್ವ ಸನ್ನದ್ಧವಾಗಿಡಬೇಕು ಎಂದು ಅಧಿಸೂಚನೆ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ನಿವೃತ್ತಿಯ ನವೆಂಬರ್ 17ಕ್ಕೂ ಮುನ್ನವೇ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಜಮೀನು ವಿವಾದಕ್ಕೆ ಸಂಬಂಧಿಸಿದ ತೀರ್ಪನ್ನು ಪ್ರಕಟಿಸುವ ನಿರೀಕ್ಷೆ ಇದೆ.

Comments are closed.