ಕರ್ನಾಟಕ

ರಾಜ್ಯದ ಕೆಲವು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ನ.೮ರಂದು ಸ್ಥಗಿತ

Pinterest LinkedIn Tumblr

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ನಡೆಸಲಾಗುತ್ತಿರುವ ವೈದ್ಯರ ಮುಷ್ಕರ 6ನೆ ದಿನಕ್ಕೆ ಕಾಲಿಟ್ಟಿದ್ದು , ಬೇಡಿಕೆ ಈಡೇರದಿದ್ದರೆ ಶುಕ್ರವಾರದಿಂದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ವಿವಿಧ ಸಂಘ-ಸಂಸ್ಥೆಗಳು , ವೈದ್ಯಕೀಯ ಕಾಲೇಜುಗಳು ಬೆಂಬಲ ವ್ಯಕ್ತಪಡಿಸಿವೆ.ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಭಾಗಿಯಾಗಿದ್ದು ಮಹದಾಯಿ ಹೋರಾಟಗಾರರು ವೈದ್ಯರಿಗೆ ಬೆಂಬಲ ನೀಡಿರುವುದು ಮುಷ್ಕರ ನಿರತರಿಗೆ ಆನೆ ಬಲ ಬಂದಂತಾಗಿದೆ.

ನಿನ್ನೆ ರಾಜ್ಯದ ಕೆಲವೆಡೆ ಡಾಕ್ಟರ್‌ಗಳು ಸಾಂಕೇತಿಕ ಪ್ರತಿಭಟನೆ ನಡೆಸಿ ವೈದ್ಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು , ಮುಷ್ಕರ ನಿರತ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಶುಕ್ರವಾರದವರೆಗೆ ಗಡುವು ನೀಡಿರುವ ವೈದ್ಯರು ತಮ್ಮ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ಯನ್ನು ಉಗ್ರ ಸ್ವರೂಪಕ್ಕೆ ಕೊಂಡೊಯ್ಯಲು ತೀರ್ಮಾನಿಸಿದ್ದಾರೆ. ಶುಕ್ರವಾರದೊಳಗೆ ಬೇಡಿಕೆ ಈಡೇರದಿದ್ದರೆ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಓಪಿಡಿಗಳನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

Comments are closed.