ಕರ್ನಾಟಕ

ರಾಜ್ಯದ 55 ತಾಲೂಕುಗಳು ಪ್ರವಾಹ ಪೀಡಿತ

Pinterest LinkedIn Tumblr


ಬೆಂಗಳೂರು: ಅಕ್ಟೋಬರ್‌ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಜೀವ ಹಾನಿ, ಬೆಳೆ ಹಾನಿ ಹಾಗೂ ಮೂಲ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶಗಳು ಎಂದು ಘೋಷಿಸಿರುವ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಹಾಗೂ ಸರಕಾರದಿಂದ ಕಾಲ ಕಾಲಕ್ಕೆ ಪರಿಹಾರ ಕಾರ್ಯಗಳಿಗೆ ಹೊರಡಿಸಲಾದ ಸುತ್ತೋಲೆ- ಆದೇಶಗಳಲ್ಲಿನ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಪರಿಹಾರ ಕಾರ್ಯ ಹಮ್ಮಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Comments are closed.