ಕರ್ನಾಟಕ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ

Pinterest LinkedIn Tumblr


ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ(GPSTR) 1:2 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ದಾಖಲೆಗಳ ಪರಿಶೀಲನಾ ಪಟ್ಟಿಗೆ ಅಭ್ಯರ್ಥಿಗಳನ್ನು, B.Ed, D.Ed, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೆಗೆದ ಅಂಕಗಳ ಆಧಾರಿತವಾಗಿ ಆಯ್ಕೆ ಮಾಡಿ ಪ್ರಕಟಿಸಲಾಗಿದೆ. ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಚೆಕ್‌ ಮಾಡಬಹುದು.

ಮೇಲೆ ನೀಡಲಾದ ಪಟ್ಟಿಯಲ್ಲಿ ಹೆಸರಿರುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಛೇರಿಯಲ್ಲಿ ನಡೆಸಲಾಗುವ ಮೂಲ ದಾಖಲೆಗಳ ಪರಿಶೀಲನೆಗೆ, ಸೂಚಿತ ದಿನಾಂಕದೊಳಗಾಗಿ ನೇಮಕಾತಿಗೆ ಸಲ್ಲಿಸಿದ ಅರ್ಜಿಯಲ್ಲಿ ನಮೂದಿಸಿದ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ. ಒಂದು ವೇಳೆ ಸೂಚಿಸಿದ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಫಲವಾದಲ್ಲಿ, ಅಂತಹ ಅಭ್ಯರ್ಥಿಗಳು ಹುದ್ದೆಗೆ ಅನರ್ಹರೆಂದು ತಾತ್ಕಾಲಿಕ ಪರಿಶೀಲನಾ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

2019-20ನೇ ಸಾಲಿನಲ್ಲಿ ರಾಜ್ಯದಲ್ಲಿನ ಒಟ್ಟು 10,565 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಧಿಸೂಚನೆ ಹೊರಡಿಸಲಾಗಿತ್ತು.

ಈ ಹುದ್ದೆಗಳಿಗೆ ದಿನಾಂಕ 26-05-2019, ಮತ್ತು 2019 ರ ಜೂನ್‌ 1 ಮತ್ತು 2 ನೇ ತಾರೀಖಿನಂದು ಎರಡು ಹಂತಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಹೈದರಾಬಾದ್ ಕರ್ನಾಟಕದ 11,677 ಅಭ್ಯರ್ಥಿಗಳು ಹಾಗೂ ಇತರೆ ಜಿಲ್ಲೆಗಳ 40211 ಅಭ್ಯರ್ಥಿಗಳು ಸೇರಿ, ಒಟ್ಟು 51888 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪತ್ರಿಕೆ-2 ರಲ್ಲಿ ಶೇ.50 ಮತ್ತು ಪತ್ರಿಕೆ-3 ರಲ್ಲಿ ಶೇ.60 ಅಂಕಗಳ ಅರ್ಹತಾ ಮಾನದಂಡವನ್ನು ನಿಗದಿಪಡಿಸಲಾಗಿತ್ತು.

Comments are closed.