ಕರ್ನಾಟಕ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು : ಎದೆನೋವು , ಅಧಿಕ ರಕ್ತದೊತ್ತಡ ಹಾಗೂ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ನಲ್ಲಿರುವ ಅಪೊಲೊ ಆಸ್ಪತ್ರೆಗೆ ಕಳೆದ ತಡರಾತ್ರಿ ಶಿವಕುಮಾರ್ ಅವರನ್ನು ಪತ್ನಿ ಉಷಾ ಹಾಗೂ ಪುತ್ರಿ ದಾಖಲು ಮಾಡಿದ್ದಾರೆ.ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಸದ್ಯ, ಅವರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಅಪೊಲೊ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಂಕರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಶಿವಕುಮಾರ್ ಗೆ ವಿಶ್ರಾಂತಿಯ ಅಗತ್ಯವಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕನಿಷ್ಠ ಮೂರು ದಿನಗಳ ಕಾಲ ಯಾರೊಬ್ಬರೂ ಬರಬಾರದೆಂದು ವೈದ್ಯರು ಮನವಿ ಮಾಡಿದ್ದಾರೆ.

ಅಕ್ಟೋಬರ್​ ಕೊನೆಯ ವಾರದಲ್ಲಿ ಡಿಕೆಶಿ ಜೈಲಿನಿಂದ ಹೊರ ಬಂದಿದ್ದರು. ನಂತರ ಆಸ್ಪತ್ರೆಗೆ ತೆರಳಿ ಬಿಪಿ,‌ ಶುಗರ್ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಆಸ್ಪತ್ರೆಯಲ್ಲೇ ಇರಬೇಕು ಎಂದು ವೈದ್ಯರು ಹೇಳಿದ್ದರು. ಆದರೆ, ಕನಕಪುರಕ್ಕೆ ಹೋಗುವ ಸಲುವಾಗಿ ಡಿಕೆಶಿ ಡಿಸ್ಚಾರ್ಜ್ ಆಗಿದ್ದರು. ಈಗ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅವರ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಈ ಹಿನ್ನೆಲೆ ಆಸ್ಪತ್ರೆಗೆ ಯಾರನ್ನು ಬಿಡುವ ಸಾಧ್ಯತೆ ಇಲ್ಲವಾಗಿದೆ. ಬಂದವರು ವೈದ್ಯರನ್ನು ಸಂಪರ್ಕಿಸಿ ತೆರಳುವ ಅವಕಾಶ ಮಾತ್ರ ಸಿಗಲಿದೆ. ಕಳೆದ ಹತ್ತು ದಿನದ ಹಿಂದೆಯಷ್ಟೇ ಡಿಕೆಶಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಿಪಿ ಶುಗರ್ ಪರೀಕ್ಷೆಗೆ ಎಂದು ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳಿದ್ದ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 23ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗ ಅನಾರೋಗ್ಯ ಸಮಸ್ಯೆ ಎದುರಿಸಿದ್ದ ಮಾಜಿ ಸಚಿವರಿಗೆ ಅರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಜಾಮೀನು ಪಡೆದು ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಬೆಂಗಳೂರಿಗೆ ಆಗಮಿಸಿದ ದಿನವೇ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಬಳಿಕ ಅವರು ರಾಜ್ಯದ ವಿವಿಧ ಮಠಗಳಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದರು.

ಭೇಟಿಗೆ ಯಾರೂ ಬರಬೇಡಿ:
ಡಿಕೆ ಶಿವಕುಮಾರ್ ಅವರ ಭೇಟಿಗೆ ಯಾರು ಬರದಂತೆ ಅವರ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಡಿಕೆಶಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳಲ್ಲಿ ಕುಟುಂಬಸ್ಥರು ಈ ಮನವಿ ಮಾಡಿದ್ದಾರೆ.

ಪ್ರಕರಣ ಏನಾಗಿತ್ತು?
ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್​ ಅವರಿಗೆ ಸೇರಿದ ಫ್ಲಾಟ್​ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಹಾಗೂ ಆಪ್ತರ ಮನೆಗಳಲ್ಲಿ 8.59 ಕೋಟಿ ಹಣ ಜಪ್ತಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅವರು ಇಡಿ ಅವರನ್ನು ವಶಕ್ಕೆ ಪಡೆದಿತ್ತು. ನಂತರ ಜಾಮೀನು ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದರು.ಜಾಮೀನು ಸಿಕ್ಕಿ ಮೂರು ದಿನಗಳ ನಂತರ ಅಂದರೆ ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳಿಕ ಹಲವು ದೇವಾಲಯ , ಮಠಗಳಿಗೆ ಭೇಟಿ ನೀಡಿದ್ದರು.

Comments are closed.