ನಿಯಮ ಉಲ್ಲಂಘಿಸಿ ವಿದೇಶಿ ದೇಣಿಗೆ ಪಡೆದಿದ್ದ ದೇಶದ 1,807 ಸರ್ಕಾರೇತರ ಸಂಸ್ಥೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಈ ಸಂಸ್ಥೆಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಗಿಯನ್ನು ಕೇಂದ್ರ ಗೃಹ ಸಚಿವಾಲಯ ರದ್ದುಗೊಳಿಸಿದೆ.
ಈ ಸಂಸ್ಥೆಗಳು ಕಳೆದ ಆರು ವರ್ಷಗಳಿಂದ ತಮಗೆ ಬಂದಿರುವ ವಿದೇಶಿ ದೇಣಿಗೆ, ವಾರ್ಷಿಕ ಆದಾಯ ಹಾಗೂ ಖರ್ಚಿನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಮಾರ್ಗಸೂಚಿ ಅನ್ವಯ ಪ್ರತಿ ಸಂಸ್ಥೆಗಳು ಹಣಕಾಸು ವರ್ಷಾಂತ್ಯಕ್ಕೆ ಮುಂಚಿತವಾಗಿ ಸಂಪೂರ್ಣ ಆಯವ್ಯಯ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಆದರೆ ಈ ಸಂಸ್ಥೆಗಳು ಹಲವು ಬಾರಿ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲವೆನ್ನಲಾಗಿದೆ.
Comments are closed.