ಕರ್ನಾಟಕ

ಬಿಜೆಪಿ ಸೇರ್ಪಡೆಗೆ ಬ್ರೇಕ್; ಪಕ್ಷೇತರ ಅಭ್ಯರ್ಥಿಯಾಗಿ ರೋಷನ್ ಬೇಗ್ ಕಣಕ್ಕೆ

Pinterest LinkedIn Tumblr


ಬೆಂಗಳೂರು: ಶಿವಾಜಿನಗರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡದ ಕಾರಣಕ್ಕೆ ಅನರ್ಹ ಶಾಸಕ ರೋಷನ್ ಬೇಗ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿಗೆ ಎರಡನೇ ಬಂಡಾಯ ಎದುರಾಗಿದೆ.

ಬಿಜೆಪಿ ತಮಗೇ ಟಿಕೆಟ್ ನೀಡಲಿದೆ ಎಂದು ಭಾರೀ ಆಸೆ ಇಟ್ಟುಕೊಂಡಿದ್ದ ಅನರ್ಹ ಶಾಸಕ ರೋಷನ್ ಬೇಗ್ ಅವರಿಗೆ ಬಿಜೆಪಿ ಟಿಕೆಟ್ ನೀಡದೆ ನಿರಾಸೆ ಉಂಟು ಮಾಡಿತ್ತು. ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಥಳುಕು ಹಾಕಿಕೊಂಡಿರುವುದರಿಂದ ಅವರಿಗೆ ಟಿಕೆಟ್ ನೀಡುವುದಕ್ಕೆ ಸಂಘ ಪರಿವಾರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಿವಾಜಿ ನಗರ ಕ್ಷೇತ್ರದಿಂದ ಸರವಣ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತು.

ಇದರಿಂದ ತೀವ್ರ ಅಸಮಾಧಾನಗೊಂಡ ರೋಷನ್ ಬೇಗ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇದರೊಂದಿಗೆ ಬಿಜೆಪಿಗೆ ಎರಡನೇ ಬಂಡಾಯ ಎದುರಾಗಿದೆ. ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Comments are closed.