
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ್ದ ನ್ಯಾ.ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
Comments are closed.