ಕರ್ನಾಟಕ

ಪ್ರಾಣಾಪಾಯದಿಂದ ಪಾರಾದ ಶಾಸಕ ತನ್ವೀರ್ ಸೇಠ್

Pinterest LinkedIn Tumblr


ಮೈಸೂರು: ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಾಸಕ ತನ್ವೀರ್ ಸೇಠ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಆರೋಗ್ಯದ ಕುರಿತಾಗಿ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಇನ್ನೆರಡು ದಿನಗಳಲ್ಲಿ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದರು.

ನವೆಂಬರ್ 17 ರಾತ್ರಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಲಾಗಿತ್ತು. ಹಲ್ಲೆಯಿಂದ ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಗಾಯಗೊಂಡ ತನ್ವೀರ್ ಸೇಠ್ ಅವರನ್ನು ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಆಸ್ಪತ್ರೆಯ ಐಸಿಯುನಲ್ಲಿ ಶಾಸಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಕುರಿತಾಗಿ ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಮಾಹಿತಿ ನೀಡಿದ್ದು ಯಾವುದೇ ಶಸ್ತ್ರಚಿಕಿತ್ಸೆಯ ಅಗಯ್ಯವಿಲ್ಲವಾಗಿರುವುದರಿಂದ ಇನ್ನೆರೆಡು ದಿನಗಳಲ್ಲಿ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಪ್ರಕರಣದ ಹಿಂದೆ ವ್ಯವಸ್ಥಿತ ಸಂಚು ನಡೆದಿರುವ ಸಾಧ್ಯತೆ ಇದ್ದು ಶಂಕಿತ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿ ಫರ್ಹಾನ್ ಪಾಷಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ( ಪಿಎಫ್ಐ) ಸಂಘಟನೆಯಲ್ಲಿ ಸಕ್ರಿಯವಾಗಿದ್ದಾನೆ ಅಲ್ಲದೆ ಅದರ ರಾಜಕೀಯ ಪಕ್ಷವಾಗಿರುವ ಎಸ್‌ಡಿಪಿಐಯಲ್ಲೂ ಕಾರ್ಯಕರ್ತನಾಗಿದ್ದಾನೆ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ಘಟನೆಗೆ ಏನಾದರೂ ನಂಟು ಇದ್ಯಾ ಎಂಬುವುದರ ಕುರಿತಾಗಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ಪ್ರಮುಖ ಆರೋಪಿ ಫರ್ಹಾನ್ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ ಸಂಧರ್ಭದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗೆ ಸೇರಿದ ಕರಪತ್ರಗಳು, ಬಟ್ಟಿಂಗ್ಸ್‌ಗಳು ಹಾಗೂ ಮಾರಕಾಸ್ತ್ರಗಳು ಪತ್ತೆಯಾಗಿವೆ.

Comments are closed.