ಕರ್ನಾಟಕ

ಸೈಕ್ಲೋನಿಕ್ ಪ್ರಭಾವದಿಂದ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆ ಸಂಭವ.

Pinterest LinkedIn Tumblr

ಬೆಂಗಳೂರು: ದಕ್ಷಿಣ ಭಾರತದಾದ್ಯಂತ ಈಶಾನ್ಯ ಮಾನ್ಸೂನ್ ಪ್ರಾಬಲ್ಯ ಹೊಂದಿರುವ ಹಿನ್ನಲೆಯಲ್ಲಿ ಮುಖ್ಯವಾಗಿ ತಮಿಳುನಾಡು, ಕೇರಳ, ದಕ್ಷಿಣ ಆಂಧ್ರಪ್ರದೇಶ, ಮತ್ತು ದಕ್ಷಿಣ ಕರ್ನಾಟಕದ ಮೇಲೆ ಗುಡುಗು ಸಹಿತ ಮಳೆಯಾಗುತ್ತದೆ ಎನ್ನಲಾಗಿದೆ.

ಮುಂದಿನ ಐದು ದಿನಗಳವರೆಗೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸರಾಸರಿ ಅಥವಾ ಬೆಚ್ಚಗಿರುತ್ತದೆ. ಬೆಳಗಿನ ಕನಿಷ್ಠವು ದೇಶಾದ್ಯಂತ ಸಾಮಾನ್ಯಕ್ಕಿಂತ ಬೆಚ್ಚಗಿರುತ್ತದೆ ಎನ್ನಲಾಗಿದೆ. ಅಸ್ಸಾಂನಲ್ಲಿ ಸೈಕ್ಲೋನಿಕ್ ಇರುವ ಕಾರಣದಿಂದ ಅಸ್ಸಾಂ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಪಕ್ಕದ ಪ್ರದೇಶಗಳಲ್ಲಿ ಮಳೆಯಯಾಗುವ ಸಂಭವಿದೆ ಎನ್ನಲಾಗಿದೆ.

ಮುಂದಿನ ಐದು ದಿನಗಳವರೆಗೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸರಾಸರಿ ಇರುತ್ತದೆ. ತಮಿಳುನಾಡು ಮತ್ತು ಕೇರಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Comments are closed.