ಕರ್ನಾಟಕ

ರಾಜ್ಯಾಧ್ಯಂತ ಫ್ಲೆಕ್, ಬ್ಯಾನರ್ ನಿಷೇಧಕ್ಕೆ ಹೈಕೋರ್ಟ್ ಆದೇಶ

Pinterest LinkedIn Tumblr

ಬೆಂಗಳೂರು : ಇದುವರೆಗೆ ಬೆಂಗಳೂರು ನಗರದಲ್ಲಿ ಮಾತ್ರ ಫ್ಲೆಕ್ಸ್, ಬ್ಯಾನರ್ ನಿಷೇಧ ಮಾಡಲಾಗಿತ್ತು. ಇದೀಗ ಹೈಕೋರ್ಟ್ ರಾಜ್ಯಾಧ್ಯಂತ ಫ್ಲೆಕ್, ಬ್ಯಾನರ್ ನಿಷೇಧಗೊಳಿಸಿ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕ್‌ ಆದೇಶ ಹೊರಡಿಸಿದ್ದಾರೆ.

ರಾಜ್ಯಾಧ್ಯಂತ ಫ್ಲೆಕ್ಸ್, ಬ್ಯಾನರ್ ನಿಷೇಧಿಸುವಂತೆ ಆರ್ ಟಿ ಐ ಕಾರ್ಯಕರ್ತ ಸಾಯಿದತ್ತ ಎಂಬುವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕ್‌ ಅವರು, ರಾಜ್ಯಾಧ್ಯಂತ ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಅಂದಹಾಗೇ ಈ ಮೊದಲು ಹೈಕೋರ್ಟ್ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಫ್ಲೆಕ್ಸ್, ಬ್ಯಾನರ್ ನಿಷೇಧ ಮಾಡಿತ್ತು. ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸದ ಸರ್ಕಾರಕ್ಕೆ, ಬಿಬಿಎಂಪಿಗೂ ಈ ಹಿಂದೆ ಚಾಟಿ ಬೀಸಿತ್ತು. ಈ ಬಳಿಕ ಇದೀಗ ರಾಜ್ಯಾಧ್ಯಂತ ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

Comments are closed.