ಕರ್ನಾಟಕ

ಎಂಎಲ್ ಎ ಮಗನೆಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

Pinterest LinkedIn Tumblr


ಬೆಂಗಳೂರು: ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ತಮಿಳುನಾಡಿನ ತಿರುಚಿಯ ಶ್ರೀರಂಗಂನ ನಿವಾಸಿ ಜಹಂಗೀರ್(30) ಬಂಧಿತ ಎಂಬಿಎ ಪದವೀಧರ. ಈತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಸ್ಕೋಡಾ ಕಾರು, ಮೊಬೈಲ್, ಹ್ಯಾಂಡ್ ಬ್ಯಾಗ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೂರ್ವವಿಭಾಗದ ಡಿಸಿಪಿ ಡಾ. ಎಸ್.ಟಿ. ಶರಣಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಐಷಾರಾಮಿ ಕಾರಿನಲ್ಲಿ ಶ್ರೀಮಂತರ ವೇಷಭೂಷಣದೊಂದಿಗೆ ಬರುವ ಆರೋಪಿ, ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಈ ಕೃತ್ಯವೆಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಜಹಂಗೀರ್ 2017ರಿಂದ ಮಹಿಳೆಯರಿಗೆ ವಂಚಿಸುತ್ತಿದ್ದಾನೆ. ಈವೆರೆಗೆ ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಮಾಡೆಲಿಂಗ್‌ ಮತ್ತು ನಟಿಯನ್ನಾಗಿ ಮಾಡಿಸುತ್ತೇನೆಂದು ಸುಲಿಗೆ ಮತ್ತು ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಅಲ್ಲದೆ, ಡ್ರಾಪ್‌ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮೀಡಿಯಾ ಮತ್ತು ಅಡ್ವಟೈಸ್‌ ಕಂಪನಿಯಲ್ಲಿ ದೊಡ್ಡ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿರುವುದಾಗಿ ಮಹಿಳೆಯರು ಆರೋಪಿಸಿದ್ದಾರೆ.

Comments are closed.