ಕರ್ನಾಟಕ

ಎರಡು ದಿನಗಳ ಕಾಲ ತಮಿಳುನಾಡಿಗೆ ಭಾರಿ ಮಳೆಯ ಹೈ ಅಲರ್ಟ್ ಘೋಷಣೆ

Pinterest LinkedIn Tumblr

ಚೆನ್ನೈ: ತಮಿಳುನಾಡಿಗೆ ಈಗ ಜಲ ಸಂಕಟ ಎದುರಾಗಿದೆ. ಪ್ರತಿ ವರ್ಷೂ ಮುಂಗಾರಿಗಿಂತ ಹಿಂಗಾರು ಮಳೆ ತಮಿಳುನಾಡಿಲ್ಲಿ ಭಾರಿ ಅನಾಹುತವನ್ನೇ ಸೃಷ್ಟಿಸುತ್ತಿದೆ.

ತಮಿಳುನಾಡಿಗೆ ಭಾರಿ ಮಳೆಯ ಹೈ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 26-27ರಂದು ಎರಡು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು, ಹರ್ಯಾಣ, ಪಂಜಾಬ್, ರಾಜಸ್ಥಾನದಲ್ಲೂ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಇನ್ನಿತರೆಡೆ ಹಿಮಪಾತ ಆರಂಭವಾಗಿದೆ.

ತಮಿಳುನಾಡು, ಪುದುಚೆರಿ, ಕರೈಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮತ್ತೊಂದು ಕಡೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಖಂಡ, ಹರ್ಯಾಣ ಭಾಗಗಳಲ್ಲಿ ಹಿಮಪಾತವಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಕನಿಷ್ಠ ಉಷ್ಣಾಂಶ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Comments are closed.