
ಚಿಕ್ಕಮಗಳೂರು: ಕಾಫಿ ಡೇ ಸಿದ್ಧಾರ್ಥ್ ಒಡೆತನದ ಎಬಿಸಿ ಕಂಪನಿ ತೀವ್ರ ನಷ್ಟದ ಹಿನ್ನೆಲೆಯಲ್ಲಿ ಕಂಪನಿಯಿಂದ ಅರವತ್ತಕ್ಕೂ ಹೆಚ್ಚು ಕಾರ್ಮಿಕರಿಗೆ ಗೇಟ್ ಪಾಸ್ ನೀಡಲಾಗಿದೆ.
ಕಂಪೆನಿಯ ಈ ನಷ್ಟದಿಂದ ಕಾರ್ಮಿಕರನ್ನು ಗೇಟ್ ಪಾಸ್ ಮಾಡಿದ ಹಿನ್ನಲೆಯಲ್ಲಿ ಕೆಲಸ ಕಳೆದುಕೊಂಡು, ನೊಂದ ಕಾರ್ಮಿಕರು ಚಿಕ್ಕಮಗಳೂರು ನಗರದ ಮೂಡಿಗೆರೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಬಿಸಿ ಸಂಸ್ಥೆಯ ಮುಂದೆ ಪ್ರತಿಭಟನೆ ನಡಸುತ್ತಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಡಿಆರ್ ಪೊಲೀಸ್ ನಿಯೋಜನೆ ಮಾಡಲಾಗಿದೆ. ಯಾವುದೇ ಸೂಚನೆ,ನೋಟಿಸ್ ನೀಡದೆ ಕೆಲಸದಿಂದ ವಜಾ ಮಾಡಿರುವುದರಿಂದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಾರ್ಥ್ ಸಾವಿನ ಬಳಿಕ ಎಬಿಸಿ ಕಂಪೆನಿ ತೀವ್ರ ನಷ್ಟವನ್ನು ಅನುಭವಿಸಿದೆ ಎನ್ನಲಾಗಿದೆ.
Comments are closed.