ಕರ್ನಾಟಕ

ಅಶ್ಲೀಲ ಚಿತ್ರಕ್ಕಾಗಿ ಮಕ್ಕಳ ದುರ್ಬಳಕೆ -ವಿಶೇಷ ತಂಡ ರಚನೆಗೆ ಹೈಕೋರ್ಟ್ ಸೂಚನೆ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವ ಮತ್ತು ವಿಶೇಷ ತಂಡ ರಚನೆ ಮಾಡುವ ಕುರಿತು ನಿಲುವು ತಿಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯದಲ್ಲಿ ಮಕ್ಕಳ ನೀಲಿ ಚಿತ್ರಕ್ಕೆ ಸಂಬಂಧಿಸಿದಂತೆ ಬಚ್ಪನ್ ಬಚಾವೋ ಆಂದೋಲನ ಸಂಸ್ಥೆಯ ವಕೀಲರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದರು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆದಿದ್ದು, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವ ಮತ್ತು ವಿಶೇಷ ತಂಡ ರಚನೆಯ ಬಗ್ಗೆ ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

2018ರ ಕೇಂದ್ರ ಸರ್ಕಾರದ ವರದಿಯಂತೆ 113 ಕೇಸುಗಳು ದಾಖಲಾಗಿವೆ. ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳ ದುರ್ಬಳಕೆ ಆಗಿದೆ. 113 ಮಕ್ಕಳನ್ನು ನೀಲಿ ಚಿತ್ರಕ್ಕೆ ಬಳಸಿಕೊಳ್ಳಲಾಗಿದೆ. ಆದರೆ ಇದುವರೆಗೆ ಒಂದೇ ಒಂದು ಎಫ್‌ಐಆರ್ ದಾಖಲಾಗಿಲ್ಲ ಎನ್ನಲಾಗಿದೆ.

Comments are closed.