ಬೆಂಗಳೂರು : ಕೆಪಿಎಲ್ ನಲ್ಲಿ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು , ಸಿಸಿಬಿ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ . ಇನ್ನೂ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಹೌದು, ಬಿಸಿಸಿಐ ಅಧ್ಯಕ್ಷರಿಗೆ ಪತ್ರ ಬರೆದು ಕೆಪಿಎಲ್ ನಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ದಂಧೆ ಬಗ್ಗೆ ಸಂಪೂರರ್ಣ ಮಾಹಿತಿ ನೀಡಲಿದ್ದಾರೆ. ಮೂಲಗಳ ಪ್ರಕಾರ ಕೆಪಿಎಲ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪತ್ರ ಬರೆಯಲಿದ್ದಾರೆ ಎನ್ನಲಾಗಿದೆ.
ಯೆಸ್, ಹಾಗೇನಾದ್ರೂ ಕಮಿಷನರ್ ಭಾಸ್ಕರ್ ರಾವ್ ಬರೆದಿರುವ ಪತ್ರವನ್ನು ಗಂಗೂಲಿ ಗಂಭೀರವಾಗಿ ತೆಗೆದುಕೊಂಡರೆ ಕರ್ನಟಕ ಪ್ರೀಮಿಯರ್ ಬ್ಯಾನ್ ಆಗುವ ಸಾಧ್ಯತೆ ಇದೆ.

Comments are closed.