ಕರ್ನಾಟಕ

ರಾಜ್ಯಪಾಲ ವಜೂಬಾಯಿ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್

Pinterest LinkedIn Tumblr

ಬೆಂಗಳೂರು : ಹೃದಯ ಸಂಬಂಧಿ ತೊಂದರೆಯಿಂದಾಗಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ, ವಜುಬಾಯಿ ವಾಲಾ ಅವರಿಗೆ ಯಶಸ್ವಿ ಬೈಪಾಸ್​ ಸರ್ಜರಿ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ . ನ.24ರಂದು ಬನ್ನೇರುಘಟ್ಟದ ಫೋರ್ಟಿಸ್​ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನ.25ರಂದು ಆಸ್ಪತ್ರೆಯ ಕಾರ್ಡಿಯಾ ವಾಸ್ಕ್ಯುಲರ್​ ಸರ್ಜನ್​ ಡಾ ವಿವೇಕ್​ ಜವಲಿ ಅವರಿಗೆ ಸರ್ಜರಿ ನಡೆಸಿದ್ದರು, ಇದಾದ ಬಳಿಕ ಐದು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಇಂದು ಬೆಳಗ್ಗೆ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯಪಾಲ ವಜೂಬಾಯಿ ವಾಲಾ ಅವರಿಗೆ ನವೆಂಬರ್​ ಮೊದಲ ವಾರದಲ್ಲಿ ಆಂಜಿಯೋಗ್ರಾಂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಂದಿನಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ವೈದ್ಯರು ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಸೂಚಿಸಿದ್ದರು.

Comments are closed.