ಹೈದರಾಬಾದ್ : ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಆದೇಶಿಸಿದ್ದಾರೆ.
ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆ. ಚಂದ್ರಶೇಖರ್, ಪ್ರಿಯಾಂಕ ರೆಡ್ಡಿ ಅತ್ಯಾಚಾರ ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.
ಪ್ರಕರಣವನ್ನು ತ್ವರಿತ ವಿಚಾರಣೆಗೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ಆದೇಶಿಸಿದ್ದಾರೆ. ಅಲ್ಲದೇ ಸಂತ್ರಸ್ತೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Comments are closed.