ಕರ್ನಾಟಕ

ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಯುಕ್ತ ಡಿ.03ರಿಂದ ಡಿ.05 ರವರೆಗೆ ನಿಷೇಧಾಜ್ಞೆ ಜಾರಿ

Pinterest LinkedIn Tumblr

ಬೆಂಗಳೂರು: ಬೆಂಗಳೂರು ನಗರದ ೪ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವ ಕಾರಣದಿಂದ ಭದ್ರತೆಯನ್ನು ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ಡಿಸೆಂಬರ್ 03 ರ ಸಂಜೆ 6 ರಿಂದ ಡಿಸೆಂಬರ್ 05 ರ ಸಂಜೆ 06 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಬೆಂಗಳೂರು ನಗರದ ಕೆ.ಆರ್.ಪುರಂ, ಯಶವಂತಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಸಂಬಂಧ ಭಾರೀ ಪೊಲೀಸ್ ಬಂದೋಬಸ್ತ್ ವ್ಯೆವಸ್ಥೆ ಕೈಗೊಳ್ಳಲಾಗಿದೆ. ಉಪ ಚುನಾವಣೆಯು ಡಿಸೆಂಬರ್ 05 ರಂದು ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ನಗರದ 28 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ನಾಲ್ಕೂ ಕ್ಷೇತ್ರಗಳಲ್ಲಿಯೂ ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಸರ್ವ ವ್ಯೆವಸ್ಥೆ ಮಾಡಲಾಗಿದೆ ಎಂದು ಭಾಸ್ಕರ್ ರಾವ್ ತಿಳಿಸಿದರು.

ಉಪ ಚುನಾವಣಾ ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 7 ಜನ ಡಿಸಿಪಿಗಳು, 14 ಜನ ಎಸಿಪಿಗಳು, 30 ಪೊಲೀಸ್ ಇನ್ಸಪೆಕ್ಟರ್ ಗಳು, 68 ಪಿಎಸ್‌ಐ ಗಳು, 160 ಎಎಸ್‌ಐ ಗಳು, 1666 ಮುಖ್ಯ ಪೇದೆ ಮತ್ತು ಪೇದೆಗಳನ್ನನು ನಿಯೋಜಿಸಲಾಗಿದೆ. ಇವರ ಜೊತೆಗೆ 951 ಗೃಹ ರಕ್ಷಕ ದಳ ಸಿಬ್ಬಂದಿಯನ್ನು ಭದ್ರತೆ ಒದಗಿಸಲಾಗಿದೆ ಎಂದರು.

Comments are closed.