ಕರ್ನಾಟಕ

85ನೇ ಅ.ಭಾ.ಕ.ಸಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ಸಾಹಿತಿ ಎಚ್​.ಎಸ್​.ವೆಂಕಟೇಶ್​ಮೂರ್ತಿ ಆಯ್ಕೆ

Pinterest LinkedIn Tumblr

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ಸಾಹಿತಿ ಎಚ್​.ಎಸ್​.ವೆಂಕಟೇಶ್​ಮೂರ್ತಿ ಆಯ್ಕೆಯಾಗಿದ್ದಾರೆ.

ಈ ಸಂಬಂಧ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಮುಂದಿನ ವರ್ಷ ಫೆಬ್ರವರಿ 5, 6 ಮತ್ತು 7ರಂದು ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್‌ಎಸ್ ವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಎಚ್​ಎಸ್​ವಿ ಎಂದೇ ಖ್ಯಾತರಾಗಿರುವ ಎಚ್​.ಎಸ್​.ವೆಂಕಟೇಶ ಮೂರ್ತಿ ಅವರು ಹುಟ್ಟೂರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗ್ಗೆರೆ. ಸದ್ಯ ಬೆಂಗಳೂರಿನಲ್ಲಿ ನೆಲಸಿರುವ, ಕನ್ನಡದ ಪ್ರಮುಖ ಕವಿ, ಕಥೆಗಾರ, ಕವಿತೆ, ನಾಟಕ, ಕಾದಂಬರಿ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

Comments are closed.