ಕರ್ನಾಟಕ

ನಕಲಿ ಫೇಸ್ ಬುಕ್ ಖಾತೆಯಲ್ಲಿ ಅಶ್ಲೀಲ ಫೋಟೋ ಪೋಸ್ಟ್ ಮಾಡುತ್ತಿದ್ದ ಯುವಕನ ಬಂಧನ

Pinterest LinkedIn Tumblr

ಶಿವಮೊಗ್ಗ: ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರಮಘಟ್ಟ ನಿವಾಸಿಯಾಗಿರುವ 19 ವರ್ಷದ ಯುವಕ ಬಂಧಿತ ಆರೋಪಿ ಎಂದು ಹೇಳಲಾಗಿದೆ.

ಈತ ಮಹಿಳೆಯೊಬ್ಬರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕೆಯ ಎಡಿಟ್ ಮಾಡಿದ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದ. ಇದರಿಂದಾಗಿ ನೊಂದ ಮಹಿಳೆ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Comments are closed.