ಕರ್ನಾಟಕ

ಬಾಡಿಗೆ ಟ್ಯಾಕ್ಸಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾ, ಜಿಪಿಎಸ್,ಎಮರ್ಜೆನ್ಸಿ ಬಟನ್ ಅಳವಡಿಕೆಗೆ ಸೂಚನೆ

Pinterest LinkedIn Tumblr

ಬೆಂಗಳೂರು: ಓಲಾ, ಊಬರ್ ಸೇರಿದಂತೆ ಬಾಡಿಗೆ ಟ್ಯಾಕ್ಸಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಸೂಚನೆ ನೀಡಿದ್ದಾರೆ. ಹೈದರಾಬಾದ್‍ನ ಪ್ರಿಯಾಂಕಾರೆಡ್ಡಿ ಪ್ರಕರಣದ ಬಳಿಕ ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ವಿದೇಶಿ ಮಾದರಿಯಲ್ಲೇ ಓಲಾ, ಊಬರ್ ಖಾಸಗಿ ಟ್ಯಾಕ್ಸಿಗಳಲ್ಲೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಈ ಬಗ್ಗೆ ಗಂಭೀರ ಕ್ರಮಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಮನವಿಮಾಡುವುದಾಗಿ ತಿಳಿಸಿದರು.

ಮಹಿಳೆಯರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಯಾಬ್‍ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ, ಜಿಪಿಎಸ್,ಎಮರ್ಜೆನ್ಸಿ ಬಟನ್ ಅಳವಡಿಸುವುದು ಕಡ್ಡಾಯ. ವಿದೇಶಗಳಲ್ಲಿ ಈಗಾಗಲೇ ಈ ರೀತಿಯ ವ್ಯವಸ್ಥೆ ಇದೆ ಎಂದು ಅವರು ಹೇಳಿದರು. ಹೈದರಾಬಾದ್ ಘಟನೆ ಬಳಿಕ ಬೆಂಗಳೂರು ನಗರ ಪೊಲೀಸರು ನಿರ್ಮಿಸಿದ್ದ ಸುರಕ್ಷಾ ಆಯಪ್‍ಗೆ ಹೆಚ್ಚಿನ ಬೇಡಿಕೆ ಬಂದಿದೆ.

ಕಳೆದ ಮೂರು ದಿನಗಳಿಂದ ಅದನ್ನು ಡೌನ್‍ಲೋಡ್ ಮಾಡಿಕೊಂಡು ಬಳಸುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಅವರು ತಿಳಿಸಿದರು.

Comments are closed.