ಕರ್ನಾಟಕ

ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಯ್ತೆಂದು ಸಂಪೂರ್ಣ ಹೇಳುತ್ತೇನೆ: ಡಿಕೆಶಿ

Pinterest LinkedIn Tumblr


ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಗಿದೆಯೆಂದು ಸಂಪೂರ್ಣವಾಗಿ ಎಲ್ಲರೊಂದಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದರಬಗ್ಗೆ ನಾನು ಏನೂ ಹೇಳಲ್ಲ. ಈಗ ಕೋರ್ಟ್ ಗೆ ಹೋಗ್ತಿದ್ದೇನೆ ಎಲ್ಲವನ್ನೂ ಮಾತನಾಡ್ತೇನೆ ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ವಿಚಾರಕ್ಕೆ ನಾನು ಈಗಲೇ ಏನನ್ನೂ ಹೇಳುವುದಿಲ್ಲ ಏನಾಯ್ತು, ಹೇಗಾಯ್ತು ಎಲ್ಲದರ ಬಗ್ಗೆ ಹೇಳುತ್ತೇವೆ. ಎಲ್ಲರ ಮುಂದೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳ್ತೇನೆ ಎಂದರು.

15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ ಗೆದ್ದರೆ, ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

Comments are closed.