ಕರ್ನಾಟಕ

ಬೆಂಗಳೂರಿನಲ್ಲೇ ಡಿಕೆಶಿ ಅಮ್ಮನ ವಿಚಾರಣೆಗೆ ‘ಇಡಿ’ ಸಮ್ಮತಿ

Pinterest LinkedIn Tumblr


ಹೊಸದಿಲ್ಲಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ ಅವರ ತಾಯಿ ಗೌರಮ್ಮ ಅವರ ವಿಚಾರಣೆಯನ್ನು ಬೆಂಗಳೂರಿನಲ್ಲೇ ನಡೆಸಲು ಜಾರಿ ನಿರ್ದೇಶನಾಲಯ (ಇಡಿ) ಸಮ್ಮತಿಸಿದೆ.

ಮಾಜಿ ಸಚಿವ ಡಿಕೆ ಶಿವಕುಮಾರ್‌ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ಪ್ರಶ್ನಿಸಿ ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ದಿಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಗೌರಮ್ಮ ಅವರನ್ನು ಬೆಂಗಳೂರಿನಲ್ಲಿಯೇ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು.

ಇದೇ ವೇಳೆ ಡಿಕೆ ಶಿವಕುಮಾರ್‌ ಅವರ ಪತ್ನಿ ಉಷಾ ಮತ್ತು ಡಿಕೆಶಿ ಆಪ್ತ ಆಂಜನೇಯ ಅವರ ಸಂಬಂಧಿಕರಿಗೆ ಇಡಿ ನೀಡಿದ ಸಮನ್ಸ್‌ ಕುರಿತ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್‌ ಡಿಸೆಂಬರ್‌ 18ಕ್ಕೆ ಮುಂದೂಡಿತು.

Comments are closed.