ಕರ್ನಾಟಕ

ಬೆಳಗಾವಿ: ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಭಾರೀ ಪ್ರತಿಭಟನೆ

Pinterest LinkedIn Tumblr


ಬೆಳಗಾವಿ: ಕಡೋಲಿ ಗ್ರಾಮದಲ್ಲಿ ಬುಧ ವಾರ ನಡೆದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ (ಗಲ್ಲು) ಶಿಕ್ಷೆ ವಿ ಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿ ಕಾರಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಪೊಲೀಸ್‌ ಠಾಣೆ ಎದುರು ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರಕರಣದ ಹಿನ್ನೆಲೆಯಲ್ಲಿ ಕಡೋಲಿ ಗ್ರಾಮದಲ್ಲಿ ಶುಕ್ರವಾರ ಸ್ವಯಂ ಪ್ರೇರಿತ ಬಂದ್‌ ಆಚರಿಸಲಾಯಿತು. ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯನ್ನು ವಾಪಸ್‌ ಗ್ರಾಮಕ್ಕೆ ಕರೆದೊಯ್ದ ಆರೋಪಿ ತಂದೆಯ ವಿರುದ್ಧ ಅಪಹರಣ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಯಿತು.

ಆರೋಪಿಯನ್ನು ರಕ್ಷಿಸಲು ರಾಜಕೀಯ ಒತ್ತಡಕ್ಕೆ ಒಳಗಾಗಬಾರದು. ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರ್ಭಯಾ ಪ್ರಕರಣದ ಬಳಿಕ ರಚಿಸಲಾಗಿರುವ ಮಾರ್ಗಸೂಚಿಯಂತೆ ಪೊಲೀಸರು ಮಗು ಇದ್ದಲ್ಲಿಯೇ ಬಂದು ವಿಚಾರಣೆ ನಡೆಸಬೇಕು ಹಾಗೂ ನಿರ್ಭಯಾ ಫಂಡ್‌ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Comments are closed.