ಕರ್ನಾಟಕ

ಪೌರತ್ವ ತಿದ್ದುಪಡಿ ಕಾಯ್ದೆ: ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿ

Pinterest LinkedIn Tumblr


ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತಿದೆ. ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನಗಳ ನಿಷೇಧಾಜ್ಞೆ ಜಾರಿಯಾಗಿವೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಡಿ. 21 ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಹಲವೆಡೆ ಶಾಲಾ –ಕಾಲೇಜುಗಳು ಎಂದಿನಂತೆ ನಡೆಯಲಿದ್ದು , ಬಿಎಂಟಿಸಿ, ಮೆಟ್ರೋ, ಕೆಎಸ್ ಆರ್ ಟಿಸಿ , ರೈಲುಗಳು ಎಂದಿನಂತೆ ಸಂಚರಿಸಲಿದೆ.

ಕಲಬುರ್ಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ನಿಷೇಧಾಜ್ಞೆ ಮುಂದುವರಿದಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ. ಕಲಬುರುಗಿ ಪೀಪಲ್ಸ್ ಪೋರಂ ವತಿಯಿಂದ ಬಂದ್ ಗೆ ಕರೆ ನೀಡಿದ್ದರೂ ನಗರದಲ್ಲಿ ಜನಸಂಚಾರ ಎಂದಿನಂತಿದೆ.

ಉಳಿದಂತೆ ಯಾವ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದರೆ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸುವ ಸಾದ್ಯತೆ ಇದೆ.

ಕೆಎಸ್ ​ಆರ್ ​​​​ಪಿ ಪೊಲೀಸರ ನಿಯೋಜನೆ: ರಾಜ್ಯದೆಲ್ಲಡೆ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ. ಉಲ್ಲಂಘಿಸಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಕೆಎಸ್​​ಆರ್​ಪಿ ನಿಯೋಜನೆ ಮಾಡಲಾಗಿದೆ. ಮೈಸೂರು, ಕಲಬುರ್ಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ಶಿವಮೊಗ್ಗ, ಹಾಸನ, ವಿಜಯಪುರ, ಹುಬ್ಬಳ್ಳಿ, ಧಾರವಾಡ ಸೇರಿ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಾಗಿದೆ. ಆಯಾ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Comments are closed.